Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:3 - ಕನ್ನಡ ಸತ್ಯವೇದವು C.L. Bible (BSI)

3 ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:3
44 ತಿಳಿವುಗಳ ಹೋಲಿಕೆ  

ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು