Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:4 - ಕನ್ನಡ ಸತ್ಯವೇದವು C.L. Bible (BSI)

4 ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗಾಜದಲ್ಲಿ ಯಾರೂ ಉಳಿಯರು. ಅಷ್ಕೆಲೋನ್ ನಾಶವಾಗುವದು. ಮಧ್ಯಾಹ್ನದೊಳಗಾಗಿ ಅಷ್ಡೋದನ್ನು ಬಿಟ್ಟು ಹೋಗುವಂತೆ ಬಲವಂತ ಮಾಡಲಾಗುವುದು. ಎಕ್ರೋನ್ ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:4
9 ತಿಳಿವುಗಳ ಹೋಲಿಕೆ  

ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


ಅವರು : “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ !


ಕತ್ತಲೆಯಲಿ ಸಂಚರಿಸುವ ವಿಪತ್ತಿಗೆ I ನಡುಹಗಲಲೆ ಪೀಡಿಸುವ ಜಾಡ್ಯಕೆ II


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು