ಚೆಫನ್ಯ 2:5 - ಕನ್ನಡ ಸತ್ಯವೇದವು C.L. Bible (BSI)5 ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |