Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:8 - ಕನ್ನಡ ಸತ್ಯವೇದವು C.L. Bible (BSI)

8 “ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋವಾಬ್ಯರೂ ಅಮ್ಮೋನ್ಯರೂ ಉಬ್ಬಟೆಯಿಂದ ನನ್ನ ಜನರ ಮೇರೆಯನ್ನು ಮೀರಿ ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೀಗೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನ್ಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕೆಣಕಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಮೋವಾಬಿನ ನಿಂದೆಯನ್ನೂ ಅಮ್ಮೋನ್ಯರ ಬೈಗಳವನ್ನೂ ಅವರು ನನ್ನ ಜನರನ್ನೂ ನಿಂದಿಸಿ, ಅವರ ಮೇರೆಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಂಡದ್ದನ್ನೂ ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:8
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


“ಸರ್ವೇಶ್ವರಾ, ನಿನ್ನ ಕಿವಿಗೆ ಬಿದ್ದಿದೆ ನನ್ನ ವೈರಿ ಕಲ್ಪಿಸಿದ ಕುಯುಕ್ತಿ.


“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಮೋವಾಬಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿದ್ದಾರೆ.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.


ಹಿರಿಯಳು ಗಂಡುಮಗುವನ್ನು ಹೆತ್ತು ಅದಕ್ಕೆ “ಮೋವಾಬ್” ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷ.


ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು