Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:11 - ಕನ್ನಡ ಸತ್ಯವೇದವು C.L. Bible (BSI)

11 ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:11
29 ತಿಳಿವುಗಳ ಹೋಲಿಕೆ  

ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರವನ್ನು ಆಧಾರವಾಗಿಟ್ಟುಕೊಂಡು ದೇವರಿಗೆ ಸೇರಿದವನೆಂದು ಕೊಚ್ಚಿಕೊಳ್ಳುತ್ತೀಯೆ;


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನರಮಾನವರು ತಗ್ಗಿಹೋಗುವರು. ಕುಲೀನರು ಕುಗ್ಗಿಹೋಗುವರು. ಗರ್ವಿಷ್ಠರ ಸೊಕ್ಕು ಅಡಗಿಹೋಗುವುದು.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


“ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು