Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:13
46 ತಿಳಿವುಗಳ ಹೋಲಿಕೆ  

ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”


ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಅಕ್ರಮಗೈಯರು ಅಂಥವರಾರು I ಆತ ತೋರಿದ ಮಾರ್ಗದಲೆ ನಡೆವರು II


ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.


ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II


ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.


ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು