Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:14 - ಕನ್ನಡ ಸತ್ಯವೇದವು C.L. Bible (BSI)

14 ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:14
34 ತಿಳಿವುಗಳ ಹೋಲಿಕೆ  

ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು