Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:15 - ಕನ್ನಡ ಸತ್ಯವೇದವು C.L. Bible (BSI)

15 ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:15
48 ತಿಳಿವುಗಳ ಹೋಲಿಕೆ  

ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.


ಇದನ್ನು ಕುರಿತೇ, ‘ಸಿಯೋನ್ ನಗರಿಯೇ, ಅಂಜಬೇಡ. ಇಗೋ ನೋಡು; ಹೇಸರಗತ್ತೆಯನ್ನೇರಿ ಬರುತ್ತಿರುವನು ನಿನ್ನ ಅರಸನು’ ಎಂದಿದೆ ಪವಿತ್ರಗ್ರಂಥ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಆಕೆ ಗರ್ಭಧರಿಸಿ ಒಂದು ಗಂಡು ಮಗುವನ್ನು ಹೆತ್ತಳು. ” ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾರೆ;


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು