Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ - ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ; ಇಗೋ, ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೋವನ ದೂತನೊಂದಿಗೆ ಆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, “ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:11
16 ತಿಳಿವುಗಳ ಹೋಲಿಕೆ  

ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.


ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


“ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು.


ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.


ಕಟ್ಟಕಡೆಗೆ ಶಾಂತಿಯಿಂದ ಸುರಕ್ಷಿತವಾಗಿದೆ ಜಗವೆಲ್ಲ ಹರ್ಷಧ್ವನಿಗೈಯುತ ಹಾಡುತಿಹರು ಜನರೆಲ್ಲ.


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು