ಜೆಕರ್ಯ 1:15 - ಕನ್ನಡ ಸತ್ಯವೇದವು C.L. Bible (BSI)15 ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು. ಅಧ್ಯಾಯವನ್ನು ನೋಡಿ |