Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:5 - ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಪಿತೃಗಳು ಎಲ್ಲಿ? ಪ್ರವಾದಿಗಳು ನಿತ್ಯಜೀವಿಗಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರು ದಾಟಿಹೋದರು. ಆ ಪ್ರವಾದಿಗಳು ನಿತ್ಯಕಾಲಕ್ಕೂ ಜೀವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:5
16 ತಿಳಿವುಗಳ ಹೋಲಿಕೆ  

ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಜುದೇಯದ ಅರಸ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲ ಪುನಃ ಬರೆಯಿಸು.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರ್ಷದ ಪ್ರಾರಂಭದಲ್ಲಿ ಸುಲಿಗೆಮಾಡುವುದಕ್ಕಾಗಿ ಗುಂಪುಗುಂಪಾಗಿ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು