ಜೆಕರ್ಯ 1:8 - ಕನ್ನಡ ಸತ್ಯವೇದವು C.L. Bible (BSI)8 ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು. ಅಧ್ಯಾಯವನ್ನು ನೋಡಿ |
ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.