Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:9 - ಕನ್ನಡ ಸತ್ಯವೇದವು C.L. Bible (BSI)

9 ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನಗೆ [ಕನಸಿನ ಅರ್ಥವನ್ನು] ವಿವರಿಸುವ ದೇವದೂತನನ್ನು - ಸ್ವಾಮೀ, ಇವರು ಯಾರು ಎಂದು ನಾನು ಕೇಳಲು ಅವನು ನನಗೆ - ಇವರು ಇಂಥವರೆಂದು ನಿನಗೆ ತೋರಿಸುವೆನು ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:9
17 ತಿಳಿವುಗಳ ಹೋಲಿಕೆ  

ಅನಂತರ ಸೂತ್ರಧಾರಿಯಾದ ದೂತನು ನನ್ನ ಬಳಿ ಬಂದು: “ಮತ್ತೊಂದು ಏನೋ ಬರುತ್ತಿದೆ, ನೋಡು,” ಎಂದನು.


ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಆತನನ್ನು ಎದುರಗೊಂಡು,


“ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.


ಪುನಃ ನಾನು ದೇವದೂತನನ್ನು, “ದೀಪಸ್ತಂಭದ ಎಡಬಲಗಳಲ್ಲಿರುವ ಎಣ್ಣೆಮರಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆ.


ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.


ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು