Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:1 - ಕನ್ನಡ ಸತ್ಯವೇದವು C.L. Bible (BSI)

1 ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:1
31 ತಿಳಿವುಗಳ ಹೋಲಿಕೆ  

ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II


ಆಮೇಲೆ ಆಕಾಶ ಮಳೆ ಸುರಿಸದೆ ತಾಮ್ರದಂತೆಯೂ ಕೆಳಗೆ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವುವು.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು