ಜೆಕರ್ಯ 10:10 - ಕನ್ನಡ ಸತ್ಯವೇದವು C.L. Bible (BSI)10 ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದುಲೆಬನೋನುಗಳ ಪ್ರಾಂತಕ್ಕೆ ಬರಮಾಡುವೆನು; ಅವರಿಗೆ ಸಾಕಾದಷ್ಟು ಸ್ಥಳ ಸಿಕ್ಕದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು. ಅಧ್ಯಾಯವನ್ನು ನೋಡಿ |