ಜೆಕರ್ಯ 10:11 - ಕನ್ನಡ ಸತ್ಯವೇದವು C.L. Bible (BSI)11 ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು. ಅಧ್ಯಾಯವನ್ನು ನೋಡಿ |