Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:7 - ಕನ್ನಡ ಸತ್ಯವೇದವು C.L. Bible (BSI)

7 ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:7
31 ತಿಳಿವುಗಳ ಹೋಲಿಕೆ  

ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು