9 ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.
ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.
ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.
ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.
ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,
ನೀನು ಕಾಡು ಓಲಿವ್ ಮರದಿಂದ ಕಡಿದ ರೆಂಬೆ. ಉತ್ತಮ ತಳಿಯ ಓಲಿವ್ ಮರಕ್ಕೆ ಕೃತಕವಾಗಿ ಕಸಿಕಟ್ಟಲಾಗಿರುವೆ. ಇಸ್ರಯೇಲರಾದರೋ ಉತ್ತಮ ತಳಿಯ ಓಲಿವ್ ಮರದಲ್ಲೇ ಹುಟ್ಟಿ ಬೆಳೆದ ರೆಂಬೆಗಳು. ಅದೇ ಮರದಲ್ಲಿ ಹುಟ್ಟಿ ಬೆಳೆದ ರೆಂಬೆಗಳನ್ನು ಕಡಿದು ಮತ್ತೆ ಅದಕ್ಕೆ ಕಸಿಕಟ್ಟುವುದು ಎಷ್ಟೋ ಸುಲಭವಲ್ಲವೆ?
ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.