Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:10 - ಕನ್ನಡ ಸತ್ಯವೇದವು C.L. Bible (BSI)

10 ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು ಕನಿಕರವೆಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:10
20 ತಿಳಿವುಗಳ ಹೋಲಿಕೆ  

ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.


ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II


ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.


ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.


ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು