Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:11 - ಕನ್ನಡ ಸತ್ಯವೇದವು C.L. Bible (BSI)

11 ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:11
27 ತಿಳಿವುಗಳ ಹೋಲಿಕೆ  

ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.


ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು