Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:14 - ಕನ್ನಡ ಸತ್ಯವೇದವು C.L. Bible (BSI)

14 ಕೂಡಲೆ ಜುದೇಯ ಮತ್ತು ಇಸ್ರಯೇಲ್ ನಡುವೆ ಇದ್ದ ಸೋದರ ಸಂಬಂಧವನ್ನು ಮುರಿಯಬೇಕೆಂದು ‘ಐಕ್ಯ’ವೆಂಬ ನನ್ನ ಎರಡನೇ ಕೋಲನ್ನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೂಡಲೆ ಯೆಹೂದಕ್ಕೂ ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು ಒಗ್ಗಟ್ಟೆಂಬ ನನ್ನ ಎರಡನೆಯ ಕೋಲನ್ನು ಕತ್ತರಿಸಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:14
14 ತಿಳಿವುಗಳ ಹೋಲಿಕೆ  

ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಆಗ ನಾನು: “ಇನ್ನು ಮೇಲೆ ನಾನು ನಿಮ್ಮನ್ನು ಮೇಯಿಸೆನು. ಸಾಯಬೇಕಾದವು ಸಾಯಲಿ, ಹಾಳಾಗಬೇಕಾದವು ಹಾಳಾಗಿಹೋಗಲಿ, ಉಳಿದವುಗಳು ಒಂದನ್ನೊಂದು ಕಚ್ಚಿ ಕಬಳಿಸಿಬಿಡಲಿ,” ಎಂದೆ.


ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು