3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?
ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.
ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.
“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.
“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?
ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.