Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:4 - ಕನ್ನಡ ಸತ್ಯವೇದವು C.L. Bible (BSI)

4 ದೇವರಾದ ಸರ್ವೇಶ್ವರ ನನಗೆ ಇಂತೆಂದರು: “ಕೊಯ್ಗುರಿಗಳ ಮಂದೆಯನು ಕಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು, “ಕೊಯ್ಗುರಿಗಳ ಮಂದೆಯನ್ನು ಕಾಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು - ಕೊಯ್ಗುರಿಗಳ ಮಂದೆಯನ್ನು ಕಾಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:4
14 ತಿಳಿವುಗಳ ಹೋಲಿಕೆ  

ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು