Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:5 - ಕನ್ನಡ ಸತ್ಯವೇದವು C.L. Bible (BSI)

5 ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:5
27 ತಿಳಿವುಗಳ ಹೋಲಿಕೆ  

ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು