ಜೆಕರ್ಯ 11:9 - ಕನ್ನಡ ಸತ್ಯವೇದವು C.L. Bible (BSI)9 ಆಗ ನಾನು: “ಇನ್ನು ಮೇಲೆ ನಾನು ನಿಮ್ಮನ್ನು ಮೇಯಿಸೆನು. ಸಾಯಬೇಕಾದವು ಸಾಯಲಿ, ಹಾಳಾಗಬೇಕಾದವು ಹಾಳಾಗಿಹೋಗಲಿ, ಉಳಿದವುಗಳು ಒಂದನ್ನೊಂದು ಕಚ್ಚಿ ಕಬಳಿಸಿಬಿಡಲಿ,” ಎಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ನಾನು - ನಿಮ್ಮನ್ನು ಮೇಯಿಸೆನು; ಸಾಯುವದು ಸಾಯಲಿ, ಹಾಳಾಗುವದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವನ್ನೊಂದು ತಿನ್ನಲಿ ಅಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನಾನು, “ನಾನು ನಿಮ್ಮನ್ನು ಮೇಯಿಸುವುದಿಲ್ಲ, ಸಾಯುವಂಥದ್ದು ಸಾಯಲಿ, ಕೆಡುವಂಥದ್ದು ಕೆಡಲಿ, ಮಿಕ್ಕಾದವುಗಳು ಒಂದರ ಮಾಂಸವನ್ನು ಒಂದು ತಿನ್ನಲಿ,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |