Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:1
36 ತಿಳಿವುಗಳ ಹೋಲಿಕೆ  

ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ಮಲಾಕಿಯನ ಮುಖಾಂತರ ಇಸ್ರಯೇಲ್ ಜನರಿಗೆ ಸರ್ವೇಶ್ವರ ನೀಡಿದ ದೈವೋಕ್ತಿ:


ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.


ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ದೇವರಂತೆ ಆಕಾಶಮಂಡಲವನು ನಿನ್ನಿಂದ ನಿರ್ಮಿಸಲಾದೀತೆ? ಎರಕ ಹೊಯ್ದು ಕನ್ನಡಿಯಂತೆ ಅದನು ಗಟ್ಟಿಮಾಡಲಾದೀತೆ?


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು