Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:10 - ಕನ್ನಡ ಸತ್ಯವೇದವು C.L. Bible (BSI)

10 “ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:10
39 ತಿಳಿವುಗಳ ಹೋಲಿಕೆ  

ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನಾನೂ ಕೂಡ ತಂದೆಗೆ ಒಬ್ಬ ಚಿಕ್ಕ ಮಗುವಾಗಿದ್ದೆ, ತಾಯಿಗೆ ಏಕೈಕ ಕುಮಾರನೂ ಕೋಮಲನೂ ಆಗಿದ್ದೆ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.


ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.


ಅಂತೆಯೇ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.


ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು