ಜೆಕರ್ಯ 12:4 - ಕನ್ನಡ ಸತ್ಯವೇದವು C.L. Bible (BSI)4 ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು. ಅಧ್ಯಾಯವನ್ನು ನೋಡಿ |