Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:5
28 ತಿಳಿವುಗಳ ಹೋಲಿಕೆ  

ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II


ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.


“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.


ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;


ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು