Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:7 - ಕನ್ನಡ ಸತ್ಯವೇದವು C.L. Bible (BSI)

7 “ಸರ್ವೇಶ್ವರನಾದ ನಾನು ಜುದೇಯದ ಸೈನ್ಯಗಳು ಮೊದಲು ಜಯಗಳಿಸುವಂತೆ ಮಾಡುವೆನು. ಆಗ ದಾವೀದ ವಂಶದವರ ಹಾಗೂ ಜೆರುಸಲೇಮಿನವರ ಘನತೆ ಗೌರವ ಜುದೇಯದವರ ಘನತೆ ಗೌರವವನ್ನು ಮೀರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾವೀದ ವಂಶದವರ ಮಹಿಮೆಯೂ ಯೆರೂಸಲೇವಿುನವರ ಮಹಿಮೆಯೂ ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇದಲ್ಲದೆ ದಾವೀದನ ಮನೆಯ ಘನತೆಯೂ, ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ, ಯೆಹೋವ ದೇವರು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:7
20 ತಿಳಿವುಗಳ ಹೋಲಿಕೆ  

ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.


ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II


ಶತ್ರುಗಳು ಹರ್ಷಿಸಬಾರದು ನನ್ನ ವಿಷಯದಲಿ I ಹಿಗ್ಗಬಾರದವರು ನಾ ಜಾರಿ ಬಿದ್ದಲ್ಲಿ II


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ?


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು