Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:2 - ಕನ್ನಡ ಸತ್ಯವೇದವು C.L. Bible (BSI)

2 ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:2
40 ತಿಳಿವುಗಳ ಹೋಲಿಕೆ  

‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.


“ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ.


“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.


ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.


ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;


“ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು.


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ನನ್ನವಳನ್ನಾಗಿ ಮಾಡಿಕೊಳ್ಳುವೆನು ನಿನ್ನನ್ನು ಅನವರತ ನಿನ್ನ ವರಿಸುವೆನು ಕರುಣೆಯಿಂದ, ನೀತಿನ್ಯಾಯದಿಂದ, ನಿಶ್ಚಲ ಪ್ರೀತಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು