Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:8 - ಕನ್ನಡ ಸತ್ಯವೇದವು C.L. Bible (BSI)

8 ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:8
34 ತಿಳಿವುಗಳ ಹೋಲಿಕೆ  

ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು