ಜೆಕರ್ಯ 13:9 - ಕನ್ನಡ ಸತ್ಯವೇದವು C.L. Bible (BSI)9 ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿ |