Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಆ ದಿನದಂದು ನಾಡಿನಲ್ಲಿ ಕೋಲಾಹಲವನ್ನೆಬ್ಬಿಸಲು , ಜನರು ಭಯಭೀತಿಗೆ ಒಳಗಾಗುವರು . ಒಬ್ಬರನ್ನೊಬ್ಬರು ತಡೆಹಿಡಿದು ಹೊಡೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-15 ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:13
8 ತಿಳಿವುಗಳ ಹೋಲಿಕೆ  

ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು