Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:18 - ಕನ್ನಡ ಸತ್ಯವೇದವು C.L. Bible (BSI)

18 ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಐಗುಪ್ತ ಕುಲದವರು ಹೊರಟು ಬಾರದಿದ್ದರೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:18
8 ತಿಳಿವುಗಳ ಹೋಲಿಕೆ  

ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು.


ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.


“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.


ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು