Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:2 - ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:2
30 ತಿಳಿವುಗಳ ಹೋಲಿಕೆ  

ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:


ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.


“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಆ ದಿನದಂದು ಜೆರುಸಲೇಮಿನ ಮೇಲೆ ಬೀಳುವ ರಾಷ್ಟ್ರಗಳೆಲ್ಲವನ್ನು ನಾನೇ ಧ್ವಂಸಮಾಡುವೆನು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು