Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:20 - ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ “ಯೆಹೋವನಿಗೆ ಇದು ಮೀಸಲಾಗಿರುವದು” ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:20
43 ತಿಳಿವುಗಳ ಹೋಲಿಕೆ  

ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಠಿಕೆಗಳು, ಮುಳ್ಳುಗಳು, ಸಲಿಕೆಗಳು ಹಾಗೂ ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


“ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.


ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಅದಕ್ಕೆ ಮತ್ತೊಮ್ಮೆ ಆ ವಾಣಿ ಅವನಿಗೆ, “ದೇವರೇ ಶುದ್ಧೀಕರಿಸಿರುವ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.


ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.


ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.


ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು