Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:5 - ಕನ್ನಡ ಸತ್ಯವೇದವು C.L. Bible (BSI)

5 ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:5
30 ತಿಳಿವುಗಳ ಹೋಲಿಕೆ  

ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.


ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ.


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು