Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:1 - ಕನ್ನಡ ಸತ್ಯವೇದವು C.L. Bible (BSI)

1 ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಕಣ್ಣೆತ್ತಿನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು ಕಣ್ಣೆತ್ತಿ ನೋಡಲು, ತನ್ನ ಕೈಯಲ್ಲಿ ಅಳೆಯುವ ನೂಲು ಉಳ್ಳ ಒಬ್ಬ ಮನುಷ್ಯನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:1
12 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು : “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.


ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.


ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಮೂರು ಮೀಟರ್ ಅಳತೆಕೋಲೊಂದಿತ್ತು. ಆ ಗೋಡೆ ಮೂರು ಮೀಟರ್ ದಪ್ಪ ಹಾಗು ಮೂರು ಮೀಟರ್ ಎತ್ತರ ಇತ್ತು.


ಮತ್ತೊಂದು ದರ್ಶನದಲ್ಲಿ ನಾನು ನಾಲ್ಕು ಕೊಂಬುಗಳನ್ನು ಕಂಡೆನು.


ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು.


ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


ಮೋವಾಬಿನ ಕೊಂಬು ಕಡಿದು ಬಿದ್ದಿದೆ. ಅದರ ತೋಳು ಮುರಿದುಹೋಗಿದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು