Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:2 - ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲಿಗೆ ಹೋಗುತ್ತಿರುವೆ?” ಎಂದು ನಾನು ಅವನನ್ನು ಕೇಳಿದಾಗ, ಅವನು: “ಜೆರುಸಲೇಮಿನ ಉದ್ದ - ಅಗಲ ಎಷ್ಟಿದೆಯೆಂದು ಅಳೆಯಲು ಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಅವನನ್ನು - ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವನು ನನಗೆ - ಯೆರೂಸಲೇವಿುನ ಅಗಲ ಉದ್ದ ಇಷ್ಟಿಷ್ಟಿರಬೇಕೆಂದು ಅಳೆದು ನೋಡುವದಕ್ಕೆ ಹೋಗುತ್ತೇನೆ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು. “ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಾನು, “ನೀನು ಎಲ್ಲಿಗೆ ಹೋಗುತ್ತೀ?” ಎಂದೆನು. ಅದಕ್ಕೆ ಆತನು ನನಗೆ, “ಯೆರೂಸಲೇಮನ್ನು ಅಳತೆಮಾಡಿ, ಅದರ ಅಗಲವೆಷ್ಟು? ಅದರ ಉದ್ದವೆಷ್ಟು? ಎಂದು ನೋಡುವುದಕ್ಕೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:2
10 ತಿಳಿವುಗಳ ಹೋಲಿಕೆ  

ನೀವು ಸಮರ್ಪಿಸುವ ಪರಿಶುದ್ಧಭಾಗದ ಅಕ್ಕಪಕ್ಕದಲ್ಲಿ ಎರಡುವರೆ ಕಿಲೋಮೀಟರ್ ಅಗಲದ, ಹನ್ನೆರಡುವರೆ ಕಿಲೋಮೀಟರ್ ಉದ್ದದ ಕ್ಷೇತ್ರವನ್ನು ರಾಜಧಾನಿಗೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು; ಅದರಲ್ಲಿ ಇಸ್ರಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.


ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು.


ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು : “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.


“ಅವರು ಕೊಳಗವನ್ನು ಎಲ್ಲಿಗೆ ಎತ್ತಿಕೊಂಡು ಹೋಗುತ್ತಿದ್ದಾರೆ?” ಎಂದು ನಾನು ಕೇಳಿದೆ.


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ


ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು