Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:4 - ಕನ್ನಡ ಸತ್ಯವೇದವು C.L. Bible (BSI)

4 “ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:4
24 ತಿಳಿವುಗಳ ಹೋಲಿಕೆ  

“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”


“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


“ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.


ನಮ್ಮ ಹಬ್ಬ ಆಚರಣೆಗಳ ನಗರವಾದ ಸಿಯೋನನ್ನು ದೃಷ್ಟಿಸಿನೋಡಿ. ಆ ಜೆರುಸಲೇಮನ್ನು ಕಣ್ಣಿಟ್ಟು ನೋಡಿ. ಅದು ನೆಮ್ಮದಿಯ ನಿವಾಸವಾಗಿ, ಕೀಳಲಾಗದ, ಕೆಡವಲಾಗದ ದೃಢವಾದ ಗುಡಾರದಂತೆ ನಿಂತಿರುವುದನ್ನು ನೀವು ಕಣ್ಣಾರೆ ಕಾಣುವಿರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು