Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:2
22 ತಿಳಿವುಗಳ ಹೋಲಿಕೆ  

“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.


“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು