Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:3 - ಕನ್ನಡ ಸತ್ಯವೇದವು C.L. Bible (BSI)

3 ದೇವದೂತನ ಮುಂದೆ ನಿಂತಿದ್ದ ಯೆಹೋಶುವನು ಮಲಿನವಾದ ಬಟ್ಟೆಯನ್ನು ಧರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋಶುವನು ದೇವದೂತನ ಮುಂದೆ ಕೊಳೆಬಟ್ಟೆಯಾಗಿ ನಿಂತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಶುವನು ದೂತನ ಮುಂದೆ ನಿಂತುಕೊಂಡಿದ್ದನು. ಅವನ ವಸ್ತ್ರವು ಮಲಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋಶುವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವನಾಗಿ ದೇವದೂತನ ಮುಂದೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:3
12 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕುಬಟ್ಟೆಯನ್ನು ಉಟ್ಟ ಬಡವನು.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು