Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:4 - ಕನ್ನಡ ಸತ್ಯವೇದವು C.L. Bible (BSI)

4 ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:4
34 ತಿಳಿವುಗಳ ಹೋಲಿಕೆ  

ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


“ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು