Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:5 - ಕನ್ನಡ ಸತ್ಯವೇದವು C.L. Bible (BSI)

5 “ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ ಎಂದು ಅವನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ಹಾಕಿದರು; ಆಗ ಯೆಹೋವನ ದೂತನು ಎದ್ದು ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನಾನು, “ಅವನ ತಲೆಯ ಮೇಲೆ ಶುದ್ಧ ಮುಂಡಾಸನ್ನು ಇಡಿರಿ,” ಎಂದೆನು. ಆಗ ಸೇವಕರು ಯೆಹೋಶುವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು, ಅವನಿಗೆ ವಸ್ತ್ರಗಳನ್ನು ಧರಿಸಿದರು. ಯೆಹೋವ ದೇವರ ದೂತನು ಪಕ್ಕದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:5
13 ತಿಳಿವುಗಳ ಹೋಲಿಕೆ  

ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.


ಅವನ ತಲೆಗೆ ಪೇಟವನ್ನು ಹಾಕಿಸಿ ಪೇಟದ ಮೇಲೆ ಪವಿತ್ರ ಪಟ್ಟಿಯನ್ನು ಕಟ್ಟಿಸು;


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ಬಳಿಕ ದೇವದೂತನು ಯೆಹೋಶುವನಿಗೆ ಈ ಆಶ್ವಾಸನೆಯನ್ನು ಕೊಟ್ಟನು:


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು