Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:10
26 ತಿಳಿವುಗಳ ಹೋಲಿಕೆ  

ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


“ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.”


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು.


ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.


ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II


ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು