ಜೆಕರ್ಯ 4:11 - ಕನ್ನಡ ಸತ್ಯವೇದವು C.L. Bible (BSI)11 ಪುನಃ ನಾನು ದೇವದೂತನನ್ನು, “ದೀಪಸ್ತಂಭದ ಎಡಬಲಗಳಲ್ಲಿರುವ ಎಣ್ಣೆಮರಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದನ್ನು ಕೇಳಿ ನಾನು ದೇವದೂತನನ್ನು - ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು ಎಂದು ಪ್ರಶ್ನೆಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು. ಅಧ್ಯಾಯವನ್ನು ನೋಡಿ |