ಜೆಕರ್ಯ 4:2 - ಕನ್ನಡ ಸತ್ಯವೇದವು C.L. Bible (BSI)2 “ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.