Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:3 - ಕನ್ನಡ ಸತ್ಯವೇದವು C.L. Bible (BSI)

3 ದೀಪಸ್ತಂಭದ ಪಕ್ಕದಲ್ಲಿ ಬಲಗಡೆ ಒಂದು, ಎಡಗಡೆ ಇನ್ನೊಂದು - ಹೀಗೆ ಎರಡು ಎಣ್ಣೆಯ ಮರಗಳಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಅಂತು ಎರಡು ಮರಗಳು ಅದರ ಪಕ್ಕಗಳಲ್ಲಿವೆ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲಬದಿಯಲ್ಲಿಯೂ ಇನ್ನೊಂದು ಎಡಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರು ಮಾಡುತ್ತಿದ್ದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:3
7 ತಿಳಿವುಗಳ ಹೋಲಿಕೆ  

ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು.


ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.


ನೀನು ಕಾಡು ಓಲಿವ್ ಮರದಿಂದ ಕಡಿದ ರೆಂಬೆ. ಉತ್ತಮ ತಳಿಯ ಓಲಿವ್ ಮರಕ್ಕೆ ಕೃತಕವಾಗಿ ಕಸಿಕಟ್ಟಲಾಗಿರುವೆ. ಇಸ್ರಯೇಲರಾದರೋ ಉತ್ತಮ ತಳಿಯ ಓಲಿವ್ ಮರದಲ್ಲೇ ಹುಟ್ಟಿ ಬೆಳೆದ ರೆಂಬೆಗಳು. ಅದೇ ಮರದಲ್ಲಿ ಹುಟ್ಟಿ ಬೆಳೆದ ರೆಂಬೆಗಳನ್ನು ಕಡಿದು ಮತ್ತೆ ಅದಕ್ಕೆ ಕಸಿಕಟ್ಟುವುದು ಎಷ್ಟೋ ಸುಲಭವಲ್ಲವೆ?


ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.


ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು