Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:5 - ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಆ ದೂತನು, “ಇದು ಏನೆಂದು ನಿನಗೆ ತಿಳಿಯುವುದಿಲ್ಲವೋ? ಎಂದು ಪ್ರಶ್ನಿಸಿದನು. ಅದಕ್ಕೆ ನಾನು, “ಇಲ್ಲ, ಸ್ವಾಮೀ” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಪ್ರಶ್ನೆಮಾಡಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?” ನಾನು, “ಇಲ್ಲ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು. ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:5
9 ತಿಳಿವುಗಳ ಹೋಲಿಕೆ  

ಅದಕ್ಕೆ ಆ ದೂತನು: “ಅವು ಏನೆಂದು ನಿನಗೆ ತಿಳಿಯುವುದಿಲ್ಲವೋ” ಎಂದು ಕೇಳಿದಾಗ ನಾನು: “ಇಲ್ಲ, ಸ್ವಾಮೀ,” ಎಂದೆ.


ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?


ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.


ಆ ಗುಟ್ಟನ್ನು ನನಗೂ ವ್ಯಕ್ತಪಡಿಸಿದ್ದಾರೆ. ನಾನು ಎಲ್ಲ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನು ಎಂದೇನೂ ಅಲ್ಲ. ಆ ಕನಸಿನ ಉದ್ದೇಶ ರಾಜರಾದ ತಮಗೆ ಗೋಚರವಾಗಿ ನಿಮ್ಮ ಮನದಾಲೋಚನೆಗಳು ನಿಮಗೆ ಅರ್ಥವಾಗಲಿ ಎಂದು ನನಗೂ ವ್ಯಕ್ತಪಡಿಸಲಾಗಿದೆ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.


ಸೂತ್ರಧಾರಿ ಆದ ಆ ದೂತನನ್ನು, “ಸ್ವಾಮೀ, ಇದು ಏನನ್ನು ಸೂಚಿಸುತ್ತದೆ?” ಎಂದು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು